Tuesday, April 13, 2021

ಪಾಕಿಸ್ತಾನದಲ್ಲಿ ಸಿಲುಕಿರುವ 300 ಭಾರತೀಯರು

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ  300 ಭಾರತೀಯರು ಪಾಕಿಸ್ತಾನದಲ್ಲಿ ಸಿಲುಕಿದ್ದಾರೆ.  ಧಾರ್ಮಿಕ ಕ್ಷೇತ್ರಗಳ ಸಂದರ್ಶನ, ಕುಟುಂಬ ಸದಸ್ಯರ ಭೇಟಿಗಾಗಿ ಇವರು ಪಾಕಿಸ್ತಾನಕ್ಕೆ ತೆರಳಿದ್ದರು. ಪಂಜಾಬ್, ಉತ್ತರ ಪ್ರದೇಶ, ಮಹಾರಾಷ್ಟ್ರ ದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದರು. ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಬಳಿಕ ಸಾರಿಗೆ ವ್ಯವಸ್ಥೆ  ಸ್ಥಗಿತಗೊಂಡ ಕಾರಣ ಇವರೆಲ್ಲ ಪಾಕಿಸ್ತಾನದಲ್ಲಿ ಸಿಲುಕಿದ್ದಾರೆ. ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮೀಷನ್ ಕಚೇರಿ ಎಲ್ಲರನ್ನು ಸಂಪರ್ಕಿಸಿದ್ದು, ಸ್ವದೇಶಕ್ಕೆ ಕಳುಹಿಸುವ ಭರವಸೆ ನೀಡಿದೆ.  ಅತ್ರಿ ಗಡಿ ಮೂಲಕ ಪಾಕಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ  ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!