newsics.com
ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 38,667 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೇ ವೇಳೆ ಸೋಂಕಿಗೆ ತುತ್ತಾಗಿದ್ದ 35,743 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ವರದಿಯಾಗಿರುವ ಕೊರೋನಾ ಪ್ರಕರಣಗಳಲ್ಲಿ ಸಿಂಹ ಪಾಲು ಕೇರಳದ್ದಾಗಿದೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ 3,13,38,088 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 3,87,673 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಇದುವರೆಗೆ 53.61 ಕೋಟಿ ಜನರಿಗೆ ಕೊರೋನಾ ತಡೆ ಲಸಿಕೆ ನೀಡಲಾಗಿದೆ.