newsics.com
ಬಿಹಾರ: ಮಹಾಸಪ್ತಮಿಯಂದು ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಹುಡುಗಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಿಹಾರದ ನಳಂದಾದ ಕಾಜಿಚಕ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತಪಟ್ಟವರೆಲ್ಲರೂ 15ರಿಂದ 18 ವರ್ಷದವರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಹುಡುಗಿಯರು ಧನಯನ್ ನದಿಯಲ್ಲಿ ಈಜಲೆಂದು ಹೋಗಿದ್ದರು. ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಆಳವಾದ ಜಾಗಕ್ಕೆ ತೆರಳಿದ್ದರಿಂದ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಹುಡುಗಿಯರೊಂದಿಗೆ ಈಜಲು ತೆರಳಿದ್ದ ಯುವಕನೊಬ್ಬ ಬದುಕುಳಿದಿದ್ದಾನೆ. ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾದಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.