newsics.com
ನವದೆಹಲಿ: ಭಾರತದಲ್ಲಿ ಕಳೆದ ಏಳು ತಿಂಗಳಲ್ಲಿ ದಾಖಲೆ ಮಟ್ಟದಲ್ಲಿ ಭೂಕಂಪನ ಸಂಭವಿಸಿದೆ. ಮಾರ್ಚ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಭಾರತದಲ್ಲಿ ಭೂಮಿ 413 ಬಾರಿ ಕಂಪಿಸಿದೆ. ಭೂಗರ್ಭ ಅಧ್ಯಯನ ಇಲಾಖೆ ಈ ಮಾಹಿತಿ ಬಹಿರಂಗಪಡಿಸಿದೆ.
ಭಾರತದಲ್ಲಿ ಹಿಮಾಲಯದ ತಪ್ಪಲು ಪ್ರದೇಶ ಮತ್ತು ಅಂಡಮಾನ್ ನಿಕೋಬಾರ್ ದ್ವೀಪ ಸಮೂಹ ಭೂಕಂಪನ ವಲಯದಲ್ಲಿದೆ. ಕಳೆದ ತಿಂಗಳು ದೆಹಲಿ, ಮುಂಬೈ, ಅಹ್ಮದಾಬಾದ್ ಸೇರಿದಂತೆ ಭಾರತದ ಹಲವು ನಗರಗಳಲ್ಲಿ ಭೂಕಂಪನ ಸಂಭವಿಸಿತ್ತು.
ಇದೇ ವೇಳೆ ಅರಬ್ಬಿ ಸಮುದ್ರದಲ್ಲಿ ಸಾಮಾನ್ಯವಾಗಿ ವರ್ಷಕ್ಕೆ ಒಂದು ಚಂಡಮಾರುತ ಸೃಷ್ಟಿಯಾಗುತ್ತಿದೆ. ಆದರೆ ಈ ಬಾರಿ ಐದು ಚಂಡಮಾರುತ ಸೃಷ್ಟಿಯಾಗಿದೆ ಎಂದು ಅಧ್ಯಯನ ವರದಿ ಬಹಿರಂಗಪಡಿಸಿದೆ.