newsics.com
ಕೊಚ್ಚಿ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5-05 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ನೈಜಿರೀಯಾ ಮೂಲದ ಯುವತಿಯೊಬ್ಬಳನ್ನು ಬಂಧಿಸಲಾಗಿದೆ.
ಲಾವೋಸ್ ನಿಂದ ಕೊಚ್ಚಿಗೆ ಬಂದಿಳಿದ ಯುವತಿಯ ಬಳಿ ಕೇಂದ್ರ ಗುಪ್ತಚರ ಅಧಿಕಾರಿಗಳು ಈ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ.
ಈ ಮಾದಕ ದ್ರವ್ಯ ಸ್ವೀಕರಿಸಲು ಬಂದಿದ್ದ ಮತ್ತೊಬ್ಬ ಯುವತಿಯನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ