Monday, April 12, 2021

ಒಂದೇ ದಿನ ಮಹಾರಾಷ್ಟ್ರದಲ್ಲಿ 53 ಮಂದಿ ಸಾವು

ನವದೆಹಲಿ: ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 53 ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 3,616 ಹೊಸ ಕೋವಿಡ್‌-19 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ. ಈ ಪೈಕಿ 22,455 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 2,293 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ. 45,925 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಗಣನೀಯ ಪ್ರಮಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಗುಜರಾತ್‌ನಲ್ಲಿ 8,592 ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ 7592 ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ತಮಿಳುನಾಡಿನಲ್ಲಿ 7873 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, 50 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ಮಂದಿ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!