Tuesday, April 13, 2021

ಆಶ್ರಯಧಾಮದ 57 ಬಾಲಕಿಯರಿಗೆ ಸೋಂಕು, 7 ಅಪ್ರಾಪ್ತರು ಗರ್ಭಿಣಿಯರು!

ಲಕ್ನೋ: ಸರ್ಕಾರಿ ಉಸ್ತುವಾರಿಯಲ್ಲಿರುವ ಮಕ್ಕಳ ಆಶ್ರಯಧಾಮವೊಂದರ 57 ಅಪ್ರಾಪ್ತ ಬಾಲಕಿಯರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ, ಈ ಪೈಕಿ ಏಳು ಬಾಲಕಿಯರು ಗರ್ಭಿಣಿಯಾಗಿದ್ದಾರೆ. ಇವರಲ್ಲಿ ಒಬ್ಬರು ಎಚ್ಐವಿ ಸೋಂಕಿತರು.
ಈ ವಿದ್ಯಮಾನ ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಆಡಳಿತ ಮಂಡಳಿ ಈಗಾಗಲೇ ಆಶ್ರಯ ತಾಣಕ್ಕೆ ಬೀಗ ಜಡಿದಿದ್ದು, ಸಿಬ್ಬಂದಿಯನ್ನು ಕ್ವಾರಂಟೈನ್’ನಲ್ಲಿರಿಸಿದೆ. ಆಶ್ರಯ ತಾಣದಲ್ಲಿ 7 ಬಾಲಕಿಯರು ಗರ್ಭಿಣಿಯರಾಗಿದ್ದು, ಅವರಲ್ಲಿ 5 ಮಂದಿಗೆ ಕೊರೋನ ಸೋಂಕು ತಗಲಿದೆ. ಈ 7 ಮಂದಿ ಮೊದಲೇ ಗರ್ಭಿಣಿಯರಾಗಿದ್ದು, ಬೇರೆ ಬೇರೆ ಕಡೆಗಳಲ್ಲಿರುವ ಅವರ ಮನೆಗಳಿಗೆ ಕಳುಹಿಸಲಾಗಿದೆ ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬ್ರಹ್ಮ ದಿಯೋ ರಾಮ್ ತಿವಾರಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!