ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸ್ಥಳೀಯಾಡಳಿತ ಸಂಸ್ಶೆಗಳ ಚುನಾವಣೆಗೆ ವೇದಿಕೆ ಸಜ್ಜಾಗುತ್ತಿರುವಾಗಲೇ ರಾಜ್ಯ ಸರ್ಕಾರ 58 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಕೋಲ್ಕತ್ತದ 7 ಡಿಸಿಪಿಗಳು ಕೂಡ ಇದರಲ್ಲಿ ಸೇರಿದ್ದಾರೆ. ಸರ್ಕಾರದ ಪರ ಒಲವು ಹೊಂದಿರುವ ಹಿರಿಯ ಅಧಿಕಾರಿಗಳನ್ನು ಆಯಕಟ್ಟಿನ ಜಾಗದಲ್ಲಿ ನಿಯುಕ್ತಿಗೊಳಿಸಲು ಈ ಮೇಜರ್ ಸರ್ಜರಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಈ ಆರೋಪಗಳನ್ನು ಮಮತಾ ಬ್ಯಾನರ್ಜಿ ತಳ್ಳಿಹಾಕಿದ್ದಾರೆ. ಇದು ಆಡಳಿತಾತ್ಮಕ ಕ್ರಮ ಎಂದು ಎಂದು ಸಮರ್ಥನೆ ನೀಡಿದ್ದಾರೆ.