ಚೆನ್ನೈ: ತಮಿಳುನಾಡಿನಲ್ಲೂ ಪ್ರತಿನಿತ್ಯ ಸಾವಿರಾರು ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 5875 ಮಂದಿಗೆ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆಯು 257613ಕ್ಕೆ ಏರಿಕೆಯಾಗಿದೆ.
ಒಟ್ಟು 257613 ಕೊರೋನಾ ಸೋಂಕಿತ ಪ್ರಕರಣಗಳ ಪೈಕಿ 196483 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯಪಾಲರಿಗೆ ಕೊರೋನಾ ಸೋಂಕು; ಆಸ್ಪತ್ರೆಗೆ ದಾಖಲು
ತಮಿಳುನಾಡಿನಲ್ಲಿ ಒಂದೇ ದಿನ 5517 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ 98 ಮಂದಿ ಪ್ರಾಣ ಬಿಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆಯು 4132ಕ್ಕೆ ಏರಿಕೆಯಾಗಿದೆ. 56998 ಕೊರೋನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 60344 ಜನರ ರಕ್ತ ಮತ್ತು ಗಂಟಲು ಮಾದರಿಯನ್ನು ಸಂಗ್ರಹಿಸಿದ್ದು ಕೊರೋನಾ ಸೋಂಕು ತಪಾಸಣೆ ನಡೆಸಲಾಗಿದೆ.
ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ತಮಿಳುನಾಡು ರಾಜ್ಯಪಾಲರೂ ಕೊರೋನಾ ಸೋಂಕಿಗೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಭವನದ 84 ಮಂದಿಗೆ ಕೊರೋನಾ ಸೋಂಕು ತಗುಲಿದೆ.