newsics.com
ತಿರುಪುರ್: ದೇವಾಲಯಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಧಾರಾಪುರಂನಲ್ಲಿ ಮಂಗಳವಾರ ನಡೆದಿದೆ. ಮೃತರಲ್ಲಿ ಐವರು ಶಾಲಾ ವಿದ್ಯಾರ್ಥಿಗಳು ಮತ್ತು ಒಬ್ಬರು ಕಾಲೇಜು ವಿದ್ಯಾರ್ಥಿ ಎಂದು ಗೊತ್ತಾಗಿದೆ.
ಮೃತರನ್ನು ಮೋಹನ್, ರಂಜಿತ್, ಶ್ರೀಧರ್, ಚಕ್ರವರ್ಮಣಿ, ಅಮೀರ್ ಮತ್ತು ಯುವನ್ ಎಂದು ಗುರುತಿಸಲಾಗಿದೆ. ರಕ್ಷಿಸಲ್ಪಟ್ಟ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳು ಗುಂಪು ದಿಂಡಿಗಲ್ ಜಿಲ್ಲೆಯ ಮಂಪಾರೈನಲ್ಲಿರುವ ದೇವಸ್ಥಾನಕ್ಕೆ ಹೋಗಿದ್ದರು. ವಾಪಸಾಗುವಾಗ ನದಿಯಲ್ಲಿ ಸ್ನಾನ ಮಾಡಲು ತೆರಳಿದಾಗ ಈ ದುರ್ಘಟನೆ ಸಂಭವಿಸಿದೆ.
ಎಂಟು ವಿದ್ಯಾರ್ಥಿಗಳಲ್ಲಿ ಆರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇಬ್ಬರನ್ನು ಸ್ಥಳೀಯರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ.