ತಿರುವನಂತಪುರಂ:ಕೇರಳದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಸೋಮವಾರ 962 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೇರಳದಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ. ಇಂದು 801 ಮಂದಿಗೆ ಸಂಪರ್ಕದಿಂದಾಗಿ ರೋಗ ತಗುಲಿದೆ.
ಕಾಸರಗೋಡಿನಲ್ಲಿ 66 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಹಾವಳಿ ತೀವ್ರಗೊಂಡಿದೆ. ಇದು ಆತಂಕ ಸೃಷ್ಟಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಭಾಗದಲ್ಲಿ ಸಂಚಾರ ನಿರ್ಬಂಧವನ್ನು ಬಿಗಿಗೊಳಿಸಲಾಗಿದೆ