Tuesday, April 13, 2021

ವಾರಂಗಲ್’ನ ಬಾವಿಯಲ್ಲಿ 9 ಮೃತದೇಹ ಪತ್ತೆ

ಹೈದರಾಬಾದ್​: ತೆಲಂಗಾಣದ ವಾರಂಗಲ್​ ಗ್ರಾಮಾಂತರ ಜಿಲ್ಲೆಯ ಒಂದೇ ಬಾವಿಯಲ್ಲಿ 9 ಮೃತದೇಹಗಳು ಪತ್ತೆಯಾಗಿವೆ.
ವಾರಂಗಲ್​ ಜಿಲ್ಲೆಯ ಒಂದೇ ಕುಟುಂಬದ ಆರು ಮಂದಿ ಹಾಗೂ ಬಿಹಾರದ ಇಬ್ಬರು, ಓರ್ವ ತ್ರಿಪುರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಲ್ಲಿ ಏಳು ಮಂದಿ ಗೋಣಿ ಚೀಲ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಇವರಲ್ಲಿ ಓರ್ವ ವ್ಯಕ್ತಿಯ ಮಗಳ ಮೂರನೇ ವರ್ಷದ ಬರ್ತಡೇ ಹಿನ್ನೆಲೆಯಲ್ಲಿ ರಾತ್ರಿ ಒಟ್ಟಿಗೆ ಊಟ ಮುಗಿಸಿದ್ದರು. ಮಗಳ ತಂದೆಯು ಸಹ ಸಾವಿಗೀಡಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಗುರುವಾರ ನಾಲ್ಕು ಹಾಗೂ ಶುಕ್ರವಾರ 5 ಮೃತದೇಹಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಶವಗಳ ಮೇಲೆ ಯಾವುದೇ ರೀತಿಯ ಗಾಯಗಳಾಗಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದು, ಸದ್ಯದಲ್ಲೇ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ವಾರಂಗಲ್​ ಪೊಲೀಸ್​ ಮುಖ್ಯಸ್ಥ ವಿ.ರವೀಂದರ್ ತಿಳಿಸಿದ್ದಾರೆ. ಆದರೆ ಈ ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!