newsics.com
ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆಎಡೆಗೂ ವ್ಯಾಪಿಸಿದ್ದು, ನಂತರ ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ.
ಸಿಲಿಂಡರ್ ಸ್ಫೋಟದ ಶಬ್ಧಕ್ಕೆ ಹೆದರಿ ಜನರು ಮನೆಯಿಂದ ಹೊರಗೋಡಿದ್ದಾರೆ. ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದೆ.