Saturday, November 26, 2022

ಆಸ್ಪತ್ರೆಯಲ್ಲಿದ್ದ ರೋಗಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ: ಕೃತ್ಯ ಸಿಸಿಟಿವಿಯಲ್ಲಿ ಸೆರೆ

Follow Us

newsics.com

ಭೋಪಾಲ್(ಮಧ್ಯಪ್ರದೇಶ): ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.

ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನಾಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ದಾಮೋದರ್ ಕೋರಿ ಹೆಸರಿನ ವ್ಯಕ್ತಿಗೆ ಮಿಲನ್ ರಾಜಕ್ ಹೆಸರಿನ ವ್ಯಕ್ತಿ ಈ ಹಿಂದೆ ಹೊಡೆದು ಗಾಯಗೊಳಿಸಿದ್ದ. ಆ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ದಾಮೋದರ್ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಆಸ್ಪತ್ರೆಗೂ ಬಂದ ಮಿಲನ್, ದಾಮೋದರ್ ಬಳಿ ಬಂದು ಆತನಿಗೆ ಬೆಂಕಿ ಹಚ್ಚಿದ್ದಾನೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯೊಂದಿಗೆ ಆತ ಆಸ್ಪತ್ರೆ ದ್ವಾರದತ್ತ ಓಡಿಬಂದಿದ್ದಾನೆ.

ಮಿಲನ್ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾನೆ. ಆತ ಆಸ್ಪತ್ರೆಯಲ್ಲಿ ಲೈಟರ್ ಹಿಡಿದು ಓಡಾಡುತ್ತಿರುವುದು, ರೋಗಿಯ ಬಳಿ ಹೋಗಿ ಬೆಂಕಿ ಹಚ್ಚಿರುವುದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಸಾಗರ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಕುಶ್ವಾ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!