Wednesday, March 3, 2021

ಎ.ಆರ್. ರೆಹಮಾನ್’ಗೆ ಮಾತೃವಿಯೋಗ

newsics.com
ಮುಂಬೈ: ಆಸ್ಕರ್ ಹಾಗೂ ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ತಾಯಿ ಕರೀಮಾ ಬೇಗಂ ಸೋಮವಾರ(ಡಿ.28) ಚೆನ್ನೈನಲ್ಲಿ ನಿಧನರಾದರು.
ತಾಯಿಯವರ ನಿಧನದ ಬಗ್ಗೆ ರೆಹಮಾನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕರೀಮಾ ಬೇಗಂ ಅವರು ನಿಧನರಾಗಿದ್ದು, ಪಾರ್ಥೀವ ಶರೀರದ ಅಂತಿಮ ದರ್ಶನದ ನಂತರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ತನ್ನ ಬದುಕಿಗೆ ತಾಯಿಯ ಕೊಡುಗೆ ಅಪಾರ ಎಂಬುದಾಗಿ ಎಆರ್ ರಹಮಾನ್ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು. ರಹಮಾನ್ ತಂದೆಯ ಸ್ಟುಡಿಯೋದಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದರು. ತಂದೆ ಆರ್ ಕೆ ಶೇಖರ್ ವಿಧಿವಶರಾದಾಗ ರಹಮಾನ್ ಗೆ ಒಂಬತ್ತು ವರ್ಷ. ಬಳಿಕ ಕುಟುಂಬ ನಿರ್ವಹಣೆ ಜವಾಬ್ದಾರಿ ಎಆರ್ ರಹಮಾನ್ ಗೆ ಹೆಗಲಿಗೆ ಬಿದ್ದಿತ್ತು.
ಕರೀಮಾ ಬೇಗಂ ಅವರು ರಾಜಾಗೋಪಾಲ್ ಕುಲಶೇಖರನ್(ಆರ್ ಕೆ ಶೇಖರ್) ಅವರನ್ನು ವಿವಾಹವಾಗಿದ್ದರು. ಕುಲಶೇಖರನ್ ಹೆಸರಾಂತ ಸಂಗೀತ ನಿರ್ದೇಶಕರಾಗಿದ್ದು, ಮಲಯಾಳಂ ಸಿನಿಮಾಗಳಲ್ಲಿ ಕಾರ್ಯನಿರ್ವಹಿಸಿದ್ದರು. ಸುಮಾರು 52 ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದು (23 ಮಲಯಾಳಂ ಸಿನಿಮಾ) ಇವರು ನಿರ್ದೇಶಿಸಿದ್ದ ಚೊಟ್ಟಾ ಮುತಲ್ ಚುಡಾಲಾ ವಾರೆ ಸಂಗೀತ ಕೇರಳದಲ್ಲಿ ಸೂಪರ್ ಹಿಟ್ ಆಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...

ದಿನೇಶ್ ಕಲ್ಲಹಳ್ಳಿ ಯಾರೆಂದೇ ತಿಳಿದಿಲ್ಲ, ತನಿಖೆ ನಡೆಯಲಿ-ಸಚಿವ ರಮೇಶ್ ಜಾರಕಿಹೊಳಿ

newsics.com ಬೆಂಗಳೂರು: ಕಳೆದ 21 ವರ್ಷದಿಂದ ನಾನು ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ದಿನೇಶ್ ಕಲ್ಲಹಳ್ಳಿಯಾಗಲೀ ಯುವತಿಯಾಗಲಿ ಯಾರೆಂದು ತನಗೆ ತಿಳಿದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ‌ಹೇಳಿಕೆ ನೀಡಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ ವಿಡಿಯೋ...
- Advertisement -
error: Content is protected !!