ನಾಗೌರ್: ರಾಜಸ್ಥಾನದ ನಾಗೌರ್ ಜಿಲ್ಲೆಯ ಲಡೌನ್ ಹಾಗೂ ದಿದ್ವಾನಾ ನಡುವಿನ ಬಕಾಲಿಯಾ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ.
ಟ್ರಕ್ ಹಾಗೂ ಡಂಪರ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಅಗ್ನಿ ಅನಾಹುತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ಜೈಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡ 91.46 ಫಲಿತಾಂಶ
ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಿವೆ. ಜೆಸಿಬಿ ಸಹಾಯದ ಮೂಲಕ ರಸ್ತೆಯಲ್ಲಿನ ಅಪಘಾತಗೊಂಡ ವಾಹನಗಳನ್ನು ತೆರವು ಮಾಡಿ ಬೇರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಪೊಲೀಸರೂ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವಗಳ ಗುರುತು ಪತ್ತೆ ಕಾರ್ಯ ಮುಂದುವರೆದಿದೆ.