Sunday, December 5, 2021

ಹೊಸ ಸ್ಮಾರ್ಟ್ ಫೋನ್ ಗಳಲ್ಲಿ ಆರೋಗ್ಯ ಸೇತು ಆಪ್ ಕಡ್ಡಾಯ

Follow Us

ನವದೆಹಲಿ: ಹೊಸ ಸ್ಮಾರ್ಟ್ ಫೋನ್ ಗಳಲ್ಲಿ ಆರೋಗ್ಯ ಸೇತು ಆಪ್ ಅಗತ್ಯ ಸೇವೆಯಾಗಿರಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
ಜನಸಮುದಾಯ ನಡುವೆ ಕೊರೋನಾ ವೈರಸ್ ಸೋಂಕು ಹರಡುವುದನ್ನು ಪತ್ತೆಹಚ್ಚಲು ಆರೋಗ್ಯಸೇತು ಆಪ್ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಅದು ಬ್ಲೂಟೂಥ್ ಹಾಗೂ ಜಿಪಿಎಸ್ ವ್ಯವಸ್ಥೆಯನ್ನು ಬಳಸಿಕೊಂಡು ಬಳಕೆದಾರನ ಸ್ಥಳವನ್ನು ಪತ್ತೆಹಚ್ಚಬಲ್ಲದು.
ಲಾಕ್‌ಡೌನ್ ಹಿಂತೆಗೆದುಕೊಂಡ ಬಳಿಕ ಮಾರಾಟಕ್ಕೆ ಲಭ್ಯವಾಗುವ ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲಿ ಆರೋಗ್ಯ ಸೇತು ಆಪ್, ಅಗತ್ಯ ಸೇವೆಯಾಗಿರಬೇಕು. ನೂತನ ಸ್ಮಾರ್ಟ್‌ಫೋನ್ ಖರೀದಿಸಿದ ವ್ಯಕ್ತಿಗಳು ಅದನ್ನು ಬಳಸುವ ಮುನ್ನ ಈ ಆಪ್‌ನಲ್ಲಿ ತಮ್ಮನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗುವ ಸಾಧ್ಯತೆಗಳಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ನೋಡಲ್ ಏಜೆನ್ಸಿಗಳನ್ನು ನೇಮಿಸಲಿದೆ. ಭಾರತದಲ್ಲಿ ಮಾರಾಟವಾಗುವ ಎಲ್ಲ ನೂತನ ಸ್ಮಾರ್ಟ್‌ಫೋನ್‌ಗಳಲ್ಲಿ ಆರೋಗ್ಯ ಸೇತು ಆಪ್ ಇನ್‌ ಬಿಲ್ಟ್ ಆಗಿರುವಂತೆ ಈ ನೋಡಲ್ ಏಜೆನ್ಸಿಗಳು ಕ್ರಮ ಕೈಗೊಳ್ಳಲಿವೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!