Sunday, December 5, 2021

‘ಕೊರೋನಾ ವೈರಸ್’ಗಳೆಂದು ನರ್ಸ್ ಗಳಿಗೆ ನಿಂದನೆ

Follow Us

ಗುವಾಹಟಿ/ನವದೆಹಲಿ: ಕೊರೋನಾ ಸಂಕಷ್ಟ ಸಮಯದಲ್ಲಿ ಹಗಲಿರುಳೂ ಸೇವೆ ಸಲ್ಲಿಸುತ್ತಿರುವ ನರ್ಸ್ ಗಳನ್ನೂ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಗುವಾಹಟಿ ಹಾಗೂ ದೆಹಲಿಯ ಘಟನೆಗಳು ಸಾಕ್ಷಿಯಾಗಿವೆ.
ಏ.3ರ ಸಂಜೆ ಕರ್ತವ್ಯ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಅಸ್ಸಾಂನ ಗುವಾಹಟಿಯ ಟೆಟೇಲಿಯಾ ಪ್ರದೇಶದಲ್ಲಿ ಮನೆಯ ಟೆರೇಸ್‌ನಲ್ಲಿದ್ದ ಕೆಲವರು ತಮ್ಮನ್ನು ನೋಡಿ ‘ಕೊರೋನಾ ವೈರಸ್‌’ ಗಳೆಂದು ನಿಂದಿಸುತ್ತಿದ್ದಾರೆ ಎಂದು ಅಸ್ಸಾಂನ ಖಾಸಗಿ ಆಸ್ಪತ್ರೆಯ ನರ್ಸ್‌ ಮಣಿಪುರ ಮೂಲದ ವಿದ್ಯಾವತಿ ದೇವಿ ದೂರಿದ್ದಾರೆ.
ಈ ಬಗ್ಗೆ ಆಸ್ಪತ್ರೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಅವರು ಪೊಲೀಸರನ್ನು ಸಂಪರ್ಕಿಸಿಲ್ಲ ಎಂದವರು ಹೇಳಿದ್ದಾರೆ.
ವಾಯವ್ಯ ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಮಣಿಪುರದ 25 ವರ್ಷದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೊಬ್ಬ, ಕೊರೋನಾ ಎಂದು ಹೀಯಾಳಿಸಿ ಆಕೆಯ ಮೇಲೆ ಉಗುಳಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!