Friday, September 30, 2022

ಶ್ರೀಶೈಲ ದೇವಸ್ಥಾನದಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ: 6 ಮಂದಿ ಸಾವು

Follow Us

newsics.com

ಆಂಧ್ರಪ್ರದೇಶ: ಇಲ್ಲಿನ ರಂಟ ಚಿಂತಲ ಗ್ರಾಮದ ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆ ರಣಚಿಂತಲ ಗ್ರಾಮದಲ್ಲಿ ನಡೆದಿದ್ದು, ನಿಂತ ಟ್ರಕ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, 6 ಜನ ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದವರು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಚಾಲಕ ರಸ್ತೆಯಲ್ಲಿ ನಿಂತಿದ್ದ ಲಾರಿಯನ್ನು ಗಮನಿಸದೇ ಅವಘಡ ಸಂಭವಿಸಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಕೋಟೇಶ್ವರಿ, ರೋಷಮ್ಮ, ರಮಾದೇವಿ, ಕೋಟಮ್ಮ, ರಮಣ ಮತ್ತು ಲಕ್ಷ್ಮಿ ನಾರಾಯಣ ಎಂದು ಗುರುತಿಸಲಾಗಿದೆ.

ಸರ್ಕಾರಿ ಹುದ್ದೆಗೆ ವೃತ್ತಿಶಿಕ್ಷಣ ಕೋರ್ಸ್​ಗಳ ವಿದ್ಯಾರ್ಹತೆ ಕೂಡ ಪರಿಗಣನೆ : ರಾಜ್ಯ ಸರ್ಕಾರ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!