newsics.com
ಕೊಚ್ಚಿ: ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನಟ ದಿಲೀಪ್ ಇದೀಗ ಮತ್ತೊಂದು ಗಂಭೀರ ಆರೋಪಕ್ಕೆ ತುತ್ತಾಗಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯ ಹತ್ಯೆಗೆ ಸಂಚು ಹೂಡಿದ್ದ ಎಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸತತ ಎರಡನೆ ದಿನವಾದ ಇಂದು ಕೂಡ ದಿಲೀಪ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಕೇರಳ ಹೈಕೋರ್ಟ್ ನ ಆದೇಶದ ಮೇರೆಗೆ ದಿಲೀಪ್ ಕ್ರೈಂ ಬ್ರಾಂಚ್ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ದಿಲೀಪ್ ನನ್ನು ಬಂಧಿಸದಂತೆ ಕೇರಳ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.