Saturday, November 27, 2021

ನಟ ರಂಜಿತ್ ಚೌಧರಿ ಇನ್ನಿಲ್ಲ

Follow Us

ಮುಂಬೈ: ಬಾಲಿವುಡ್, ರಂಗಭೂಮಿ ನಟ ರಂಜಿತ್ ಚೌಧರಿ (65) ನಿಧನರಾಗಿದ್ದಾರೆಂದು ಅವರ ಸಹೋದರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ರಂಜಿತ್ ಸಹೋದರಿ ರೈಯೆಲ್ ಪದಮ್ಸೀ ಅವರು ಕಪ್ಪುಬಿಳುಪಿನ ಚಿತ್ರವನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ತಿಳಿಸಿದ್ದಾರೆ.
ಖೂಬ್ಸೂರತ್, ಕಾಮಸೂತ್ರ, ಫೈರ್, ಕಿಂಗ್ ಆಫ್ ದ ಜಂಗಲ್, ಗರ್ಲ್ 6, ಖಟ್ಟಾ ಮೀಠಾದಂತಹ ಸಿನಿಮಾದ ಮೂಲಕ ಗುರುತಿಸಿಕೊಂಡಿದ್ದ ರಂಜಿತ್ ಚೌಧರಿ ಖ್ಯಾತ ರಂಗಭೂಮಿ ನಟಿ ಪರ್ಲ್ ಪದಮ್ಸೀ ಅವರ ಪುತ್ರ. ರಂಜಿತ್ ಕುಮಾರ್ 2011ರಲ್ಲಿ ಬಿಡುಗಡೆಯಾಗಿದ್ದ ಬ್ರೇಕ್ ವೇ ಎಂಬ ಸಿನಿಮಾದಲ್ಲಿ ನಟಿಸಿದ್ದು ಕೊನೆಯದ್ದಾಗಿದೆ. ಬಾಲಿವುಡ್ ನ ಚಕ್ರಾ, ಕಾಲಿಯಾ, ಬ್ಯಾಂಡಿಟ್ ಕ್ವೀನ್ ಸೇರಿದಂತೆ 80, 90 ಸಿನಿಮಾಗಳಲ್ಲಿ ನಟಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!