newsics.com
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರದಲ್ಲಿ ಇನ್ನೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಸಿಬಿಐ ಹೇಳಿದೆ.
ಈ ಪ್ರಕರಣದ ಎಲ್ಲಾ ಅಂಶಗಳು ತನಿಖೆ ಹಂತದಲ್ಲಿವೆ ಎಂದು ಸಿಬಿಐ ತನಿಖಾ ತಂಡ ಸೋಮವಾರ ಹೇಳಿದೆ. ಸುಶಾಂತ್ ಅವರ ಸಾವಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ವೃತ್ತಿಪರ ತನಿಖೆ ನಡೆಸುತ್ತಿದೆ, ಇದರಲ್ಲಿ ಎಲ್ಲಾ ಅಂಶಗಳನ್ನು ಗಮನಿಸಲಾಗುತ್ತಿದೆ. ಈವರೆಗೆ ಯಾವುದೇ ಅಂಶವನ್ನೂ ತಳ್ಳಿ ಹಾಕಿಲ್ಲ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ. ಈ ವರ್ಷದ ಜೂನ್ ನಲ್ಲಿ ಮುಂಬೈನ ಬಾಂದ್ರಾದ ಅಪಾರ್ಟ್’ಮೆಂಟ್’ನಲ್ಲಿ ಮೃತಪಟ್ಟಿದ್ದರು. ಸುಶಾಂತ್ ಸಿಂಗ್ ರಜಪೂತ್ ತಂದೆ ಕೆ ಕೆ ಸಿಂಗ್ ಪಾಟ್ನಾದಲ್ಲಿ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಕುಟುಂಬದ ವಿರುದ್ಧ ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ.
ನಟ ಸುಶಾಂತ್ ಸಾವಿನ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿಲ್ಲ- ಸಿಬಿಐ
Follow Us