ಪುಣೆ: ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ನಡೆಯಲಿರುವ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಎಂಎಂ ಜೋಶಿ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ.
https://newsics.com/news/india/ramamandir-bhoomipuja-live-in-doradarshan/24295/
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಭಾನುವಾರ ಈ ವಿಷಯ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಧರ್ಮಗಳ ಆಧ್ಯಾತ್ಮಿಕ ಮುಖಂಡರನ್ನು ಆಹ್ವಾನಿಸುವ ಯೋಚನೆಯಿದೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು 200ಕ್ಕೂ ಹೆಚ್ಚು ಜನರಿಗೆ ಅವಕಾಶ ಇರುವುದಿಲ್ಲ. ಶಿಲಾನ್ಯಾಸ ಕಾರ್ಯಕ್ರಮ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ ಎಂದು ಅವರು ಹೇಳಿದ್ದಾರೆ.
ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.