ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಗ್ರ ನಾಯಕ ಎಲ್ ಕೆ. ಅಡ್ವಾಣಿ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ. ಬಾಬರಿ ಮಸೀದಿ ಧ್ವಂಸ ಪ್ರಕರಣದ ಷಡ್ಯಂತ್ರ ಕುರಿತು ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಗುರುವಾರ ಬಿಜೆಪಿಯ ಇನ್ನೊಬ್ಬ ಹಿರಿಯ ನಾಯಕ ಮುರಳಿ ಮನೋಹರ್ ಜೋಷಿ ತಮ್ಮ ಹೇಳಿಕೆ ದಾಖಲಿಸಿದ್ದರು. ಅಡ್ವಾಣಿ ಅವರು ತಮ್ಮ ಹೇಳಿಕೆ ದಾಖಲಿಸಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಅಡ್ವಾಣಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಪ್ರಬಲ ಪ್ರತಿಪಾದಕರಾಗಿದ್ದಾರೆ. ಅಡ್ವಾಣಿ ಅವರು ಈ ಹಿನ್ನೆಲೆಯಲ್ಲಿ ನಡೆಸಿದ ರಥಯಾತ್ರೆ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿತ್ತು. ಬಿಹಾರದಲ್ಲಿ ಅಡ್ವಾಣಿ ಅವರ ರಥಯಾತ್ರೆಯನ್ನು ಪೊಲೀಸರು ತಡೆದು ಅವರನ್ನು ಬಂಧಿಸಿದ್ದರು. ಇದು ವಿ. ಪಿ ಸಿಂಗ್ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗಿತ್ತು.