newsics.com
ನವದೆಹಲಿ: ಭಾರತದಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ಭಾನುವಾರದಿಂದ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.
ತೀವ್ರ ದುಃಖ, ವಿಷಾದ ಮತ್ತು ನಿರಾಶೆಯೊಂದಿಗೆ ದೆಹಲಿಯಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು ಅಂತ್ಯಗೊಳಿಸುವ ಈ ನಿರ್ಧಾರವನ್ನು ಪ್ರಕಟಿಸುತ್ತಿದೆ ಎಂದು ರಾಯಭಾರ ಕಚೇರಿ ಹೇಳಿಕೆ ನೀಡಿದೆ.
ಭಾರತ ಸರ್ಕಾರದಿಂದ ಸಾಕಷ್ಟು ಬೆಂಬಲ ಸಿಗುತ್ತಿಲ್ಲ. ಅಫ್ಘಾನಿಸ್ತಾನದ ಹಿತಾಸಕ್ತಿಗಳನ್ನು ಪೂರೈಸುವಲ್ಲಿ ನಿರೀಕ್ಷೆಯನ್ನು ತಲುಪುವುದು ಸಾಧ್ಯವಾಗುತ್ತಿಲ್ಲ. ಸಿಬ್ಬಂದಿ ಹಾಗೂ ಸಂಪನ್ಮೂಲದ ಕೊರತೆಯ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದೆ.
ಅಫ್ಘಾನ್ ತಾಲಿಬಾನ್ ಆಡಳಿತಕ್ಕೆ ಒಳಗಾದ ಮೇಲೆ ಭಾರತ ಮತ್ತು ಇತರ ದೇಶಗಳು ಅದರ ಮೇಲೆ ಅಷ್ಟೊಂದು ಗಮನಹರಿಸುತ್ತಿಲ್ಲ. ಈ ಕಾರಣಕ್ಕೆ ಅಫ್ಘಾನ್ ಅಸಮಾಧಾನಗೊಂಡಿದೆ.