newsics.com
ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ ಹಿಂದೂ ಸಮುದಾಯದ ಹುಡುಗಿಯರನ್ನು ಮಾತ್ರ ಅಪ್ತಾಭ್ ಟಾರ್ಗೇಟ್ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಶ್ರದ್ಧಾಳನ್ನು 35 ತುಂಡುಗಳಾಗಿ ಕತ್ತರಿಸಿ ಹಾಕಿದ್ದರೂ ಅಪ್ತಾಭ್ ಇದುವರೆಗೆ ಪಶ್ಚಾತ್ತಾಪ ಪಟ್ಟಿಲ್ಲ ಎಂದು ಕೂಡ ಹೇಳಲಾಗುತ್ತಿದೆ. ಇದೇ ವೇಳೆ ಅಪ್ತಾಭ್ ನಾರ್ಕೋ ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿದೆ