Monday, April 12, 2021

ಮತ್ತೆ ಕಾರ್ಮಿಕ ಸಚಿವಾಲಯದ 25 ಅಧಿಕಾರಿಗಳಿಗೆ ಸೋಂಕು

ನವದೆಹಲಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ಸುಮಾರು 25 ಅಧಿಕಾರಿಗಳಿಗೆ ಶುಕ್ರವಾರ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಸಚಿವಾಲಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 36ಕ್ಕೇರಿದೆ. ಈ ಪೈಕಿ ಆರು ಮಂದಿ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರ ಖಾಸಗಿ ಸಿಬ್ಬಂದಿಯೆಂದು ತಿಳಿದುಬಂದಿದೆ.
ಕಳೆದ ವಾರ ಇಬ್ಬರು ಉದ್ಯೋಗಿಗಳಲ್ಲಿ ಕೋವಿಡ್-19 ಸೋಂಕು ಪತ್ತೆಯಾದ ಬಳಿಕ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ಕಟ್ಟಡ ಶ್ರಮಶಕ್ತಿ ಭವನವನ್ನು ಸೀಲ್‌ಡೌನ್ ಮಾಡಲಾಗಿತ್ತು. ಸಚಿವಾಲಯದ ಇತರ ಸಿಬ್ಬಂದಿಯನ್ನೂ ಪರೀಕ್ಷೆಗೊಳಪಡಿಸಲಾಗಿತ್ತು. ಓರ್ವ ಜಂಟಿ ಕಾರ್ಯದರ್ಶಿ, ಶೀಘ್ರಲಿಪಿಕಾರ (ಸ್ಟೆನೋ), ಪ್ರಧಾನ ಖಾಸಗಿ ಕಾರ್ಯದರ್ಶಿ, ಖಾಸಗಿ ಕಾರ್ಯದರ್ಶಿ ಹಾಗೂ ಆರು ಸಹಾಯಕ ಅಧಿಕಾರಿಗಳು ಹಾಗೂ ಸಚಿವಾಲಯದ ಓರ್ವ ಚಾಲಕನಿಗೆ ಸೋಂಕು ತಗುಲಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!