newsics.com
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯು ಜುಲೈ 1 ರಿಂದ ಅಗ್ನಿವೀರರ ಮೊದಲ ಬ್ಯಾಚ್ಗಾಗಿ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಸುಮಾರು 10,000 ಮಹಿಳೆಯರು ಈ ಪ್ರಕ್ರಿಯೆಗೆ ನೋಂದಾಯಿಸಿಕೊಂಡಿದ್ದಾರೆ.
ನೌಕಾಪಡೆಯ ವಿವಿಧ ಭಾಗಗಳಿಗೆ ಮತ್ತು ಶಾಖೆಗಳಿಗೆ ಮಹಿಳೆಯರನ್ನು ನೇಮಕ ಮಾಡಲಾಗುತ್ತದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.