Tuesday, August 9, 2022

ಕೃಷಿ ಸಂಬಂಧಿತ ಮಸೂದೆ; ಸಚಿವೆ ಹರ್ ಸಿಮ್ರತ್ ಕೌರ್ ರಾಜೀನಾಮೆ

Follow Us

newsics.com
ನವದೆಹಲಿ: ಕೃಷಿ ಸಂಬಂಧಿತ ಮಸೂದೆ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಖಾತೆ ಸಚಿವೆ ಹರ್ ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಉದ್ದೇಶಿತ ಕೃಷಿ ಸಂಬಂಧಿತ ಮಸೂದೆ ಮಂಡನೆಗೆ ಶಿರೋಮಣಿ ಅಕಾಲಿದಳ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮೋದಿ ಸಚಿವ ಸಂಪುಟದಿಂದ ಪಕ್ಷದ ಏಕೈಕ ಪ್ರತಿನಿಧಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಗುರುವಾರದಂದು ಶಿರೋಮಣಿ ಅಕಾಲಿದಳ ಅಧ್ಯಕ್ಷ ಸುಖ್ ಬೀರ್ ಸಿಂಗ್ ಬಾದಲ್ ಈ ಬಗ್ಗೆ ಸ್ಪಷ್ಟಪಡಿಸಿದ್ದರು.
ರೈತರು ಮತ್ತು ರೈತ ಸಂಘಟನೆಗಳ ಬೇಡಿಕೆಗೆ ತಕ್ಕಂತೆ ಮೀಸಲಾತಿ ಭರವಸೆ ನೀಡದ ಹೊರತು ಮಸೂದೆಗೆ ಅನುಮೋದನೆ ನೀಡುವುದಕ್ಕೆ ಬೆಂಬಲಿಸುವುದಿಲ್ಲ ಎಂದು ಬಾದಲ್ ತಿಳಿಸಿದ್ದಾರೆ. ಈ ಮಸೂದೆಗಳನ್ನು ಪರಿಚಯಿಸುವ ಮೊದಲು, ಕೇಂದ್ರ ಸರ್ಕಾರವು ಕನಿಷ್ಠ ರೈತರ ಪಕ್ಷಗಳು, ಮಿತ್ರಪಕ್ಷಗಳನ್ನು ಸಂಪರ್ಕಿಸಬೇಕಿತ್ತು ಎಂದು ಬಾದಲ್ ಹೇಳಿದ್ದಾರೆ.
ರೈತ ಸಂಘಟನೆ, ರೈತರು ಮತ್ತು ಕೃಷಿ ಕಾರ್ಮಿಕರು ವ್ಯಕ್ತಪಡಿಸುವ ಎಲ್ಲ ಮೀಸಲಾತಿ ಬೇಡಿಕೆಗಳನ್ನು ಪರಿಹರಿಸಬೇಕಿದೆ. ಅಲ್ಲಿಯವರೆಗೆ ಸಂಸತ್ತಿನಲ್ಲಿ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ಅನುಮೋದನೆಗಾಗಿ ಪರಿಚಯಿಸದಂತೆ ಶಿರೋಮಣಿ ಅಕಾಲಿದಳ ಕೇಂದ್ರಕ್ಕೆ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!