Wednesday, July 6, 2022

ದುರಂತ ಸ್ಥಳಕ್ಕೆ ಭೇಟಿ ನೀಡಿದ ನಾಗರಿಕ ವಿಮಾನಯಾನ ಸಚಿವ

Follow Us

ಕರಿಪುರಂ: 18 ಮಂದಿಯನ್ನು ಬಲಿಪಡೆದುಕೊಂಡ ಕೇರಳದ ಕರಿಪುರಂ ವಿಮಾನ ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಭೇಟಿ ನೀಡಿದ್ದಾರೆ. ದುರಂತ ನಡೆದ  ಸ್ಥಳಕ್ಕೆ ಭೇಟಿ ನೀಡಿದ ಅವರು, ಪರಿಸ್ಥಿತಿಯ ಅವಲೋಕನ ನಡೆಸಿದರು. ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ . ಮುರಳೀಧರನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಮಧ್ಯೆ ವಿಮಾನ ದುರಂತದ ತನಿಖೆ ಬಿರುಸುಪಡೆದುಕೊಂಡಿದೆ. ನತದೃಷ್ಟ ವಿಮಾನದ  ಡಿಜಿಟಲ್  ಫ್ಲೈಟ್ ಡಾಟ ರೆಕಾರ್ಡ್ ರ್ ಮತ್ತು  ಕಾಕ್ ಪಿಟ್ ವಾಯ್ಸ್ ರೆಕಾರ್ಡ್ ಸಂಗ್ರಹಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವಿಮಾನ  ಲ್ಯಾಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ  ಪೈಲಟ್  ವಿಮಾನ ನಿಯಂತ್ರಣ ಅಧಿಕಾರಿಗಳ ಜತೆ ನಡೆಸಿದ ಸಂಭಾಷಣೆ ಮಾಹಿತಿ ಇದರಲ್ಲಿ ಸೇರಿದೆ.

ವಿಮಾನ ದುರಂತದಲ್ಲಿ ಗಾಯಗೊಂಡಿರುವ 13 ಮಂದಿಯ ಸ್ಥಿತಿ ಇದೀಗ ಗಂಭೀರವಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಲಿಂಗಾಯಿತ ಸಂಪ್ರದಾಯದಂತೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಲಾಗಿದೆ. ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಇಬ್ಬರು ಸ್ವಾಮೀಜಿಗಳು...

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್ ಪರವಾಗಿ ಹೋರಾಟ ಮಾಡುತ್ತಿದ್ದರು. ಬಂದೂಕು ಬಳಕೆಯಲ್ಲಿ...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...
- Advertisement -
error: Content is protected !!