Monday, October 3, 2022

ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ: ಕೊರೋನಾ ಹಬ್ಬುವ ಆತಂಕ

Follow Us

Newsics.com

ನವದೆಹಲಿ:  ರಾಜಧಾನಿ ನವದೆಹಲಿಯಲ್ಲಿ  ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಮುಂದಿನ ದಿನಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುವ ಆತಂಕ ವ್ಯಕ್ತವಾಗಿದೆ. ಸಂಸದೀಯ ಸಮಿತಿ ಮುಂದೆ ಪರಿಣಿತರು ಈ  ಅಭಿಪ್ರಾಯ ಮಂಡಿಸಿದ್ದಾರೆ.

ದೆಹಲಿ ಆಡಳಿತದ ಉನ್ನತ ಅಧಿಕಾರಿಗಳು ಸಂಸತ್ತಿನ   ಸ್ಥಾಯಿ ಸಮಿತಿ ಮುಂದೆ ಈ ಸಂಬಂಧ ಪ್ರಾತ್ಯಕ್ಷಿಕೆಯನ್ನು ಕೂಡ ಪ್ರಸ್ತುತ ಪಡಿಸಿದ್ದಾರೆ.

ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ರೈತರು ಕೃಷಿ ತಾಜ್ಯಗಳನ್ನು ಸುಡುತ್ತಿರುವುದರಿಂದ ವಾಯು ಮಾಲಿನ್ಯ ಹೆಚ್ಚಾಗಿದೆ. ಈ ಕಪ್ಪು ಹೊಗೆ ರಾಜಧಾನಿ ದೆಹಲಿಯನ್ನು ಆವರಿಸಿದೆ.

ಇದರಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಗುಣಮಟ್ಟ ಅಪಾಯಕಾರಿ ಹಂತಕ್ಕೆ ತಲುಪಿದೆ. ಜನರಿಗೆ ಗಂಟಲು ಕೊರೆತ ಮತ್ತು ಕಣ್ಣೀರು ಬರುತ್ತಿರುವ ಅನುಭವವಾಗುತ್ತಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಗೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ ಅದು ನಿರೀಕ್ಷಿತ ಫಲ ನೀಡಿಲ್ಲ.  ಶನಿವಾರ ದೆಹಲಿಯಲ್ಲಿ ಕೊರೋನಾದಿಂದ 79 ಮಂದಿ ಮೃತಪಟ್ಟಿದ್ದರು. ಇದು ಜೂನ್ 16ರ ಬಳಿಕ ಕೊರೋನಾಕ್ಕೆ ಬಲಿಯಾದ ಅತ್ಯಧಿಕ ಸಂಖ್ಯೆಯಾಗಿದೆ. ಶನಿವಾರ ಒಂದೇ ದಿನ 6953 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!