Sunday, December 5, 2021

ದೆಹಲಿ ಹಿಂಸಾಚಾರ ಪ್ರಕರಣ: ಪರಿಸ್ಥಿತಿ ನಿಭಾಯಿಸುವ ಹೊಣೆ ದೋವಲ್ ಹೆಗಲಿಗೆ

Follow Us

ನವದೆಹಲಿ:  ಪೌರತ್ವ ತಿದ್ದುಪಡಿ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಈಶಾನ್ಯ ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮರು ಸ್ಥಾಪಿಸುವ ಪೂರ್ಣ ಜವಾಬ್ದಾರಿಯನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ವಹಿಸಲಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿರುವ ಧೋವಲ್ ಗಲಭೆ ಪೀಡಿತ  ಜಾಫರಾ ಬಾದ್, ಮೌಜಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಎಲ್ಲ ಸಮುದಾಯದ ಮುಖಂಡರ ಜತೆಯೂ ಅವರು ಮಾತುಕತೆ ನಡೆಸಿದ್ದಾರೆ. ಗಲಭೆಯನ್ನು ತಕ್ಷಣ ನಿಯಂತ್ರಣಕ್ಕೆ ತರಬೇಕು ಮತ್ತು ಇತರ ಪ್ರದೇಶಗಳಿಗೆ ಹಬ್ಬದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದ ಸಂದೇಶವನ್ನು ಧೋವಲ್ ಅವರಿಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ. ಧೋವಲ್ ಮಾಜಿ ಐಪಿಎಸ್ ಅಧಿಕಾರಿಯೂ ಕೂಡ ಆಗಿದ್ದು, ಗಲಭೆ ನಿಯಂತ್ರಣ ವಿಷಯದಲ್ಲಿ ಸಾಕಷ್ಟು ಅನುಭವ ಕೂಡ ಹೊಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!