Wednesday, December 8, 2021

ಆಂಧ್ರದ ಎಲ್ಲ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸುಪರ್ದಿಗೆ

Follow Us

ವಿಶಾಖಪಟ್ಟಣ: ಕೊರೋನಾ ತಡೆಯುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯದ ಎಲ್ಲ ಖಾಸಗಿ ಹಾಗೂ ಕಾರ್ಪೋರೇಟ್ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಂಡಿದೆ.
2020ರ ಆಂಧ್ರಪ್ರದೇಶ ಸಾಂಕ್ರಾಮಿಕ ಕಾಯಿಲೆ ಕಾಯಿದೆಯನ್ನು ಬಳಸಿಕೊಂಡು ಜಗನ್ ಮೋಹನ್ ರೆಡ್ಡಿ ನೇತೃತ್ವದ ಅಂಧ್ರ ಪ್ರದೇಶ ಸರ್ಕಾರ, ರಾಜ್ಯದಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಸುಪರ್ದಿಗೆ ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ. ಹೊಸ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ಸಲಕರಣೆ ಹಾಗೂ ಎಲ್ಲ ಸಂಪನ್ಮೂಲಗಳನ್ನು ಸರ್ಕಾರದ ಸೇವೆಗೆ ನೀಡಬೇಕಾಗಿದೆ.
ಆಂಧ್ರಪ್ರದೇಶದಲ್ಲಿ ಸೋಮವಾರ 23 ಹೊಸ ಕೊರೋನ ಸೋಂಕು ಪ್ರಕರಣಗಳು ದೃಢವಾಗಿದ್ದು, ವಿಶಾಖಪಟ್ಟಣವೊಂದರಲ್ಲೇ 6 ಪ್ರಕರಣಗಳು ಪತ್ತೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...

ಭಾರೀ ಸದ್ದು ಕೇಳಿಸ್ತು… ಮೂವರು ಜಿಗಿದರು… ಬೆಂಕಿ ಜೋರಾಯ್ತು…

newsics.com ಊಟಿ(ತಮಿಳುನಾಡು): ನೋಡ ನೋಡುತ್ತಿದ್ದಂತೆ ಹೆಲಿಕಾಪ್ಟರ್‌ವೊಂದು‌ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದೊಡ್ಡ ಸದ್ದು ಕೇಳಿಸಿತು. ತಕ್ಷಣ ಹೊರಬಂದು‌...
- Advertisement -
error: Content is protected !!