ನವದೆಹಲಿ: ರಾಜ್ಯಸಭಾ ಸದಸ್ಯ. ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ (64) ಸಿಂಗಾಪುರ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ಕಳೆದ 6 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬಹುಕಾಲದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅಮರ್ ಸಿಂಗ್ ಅವರಿಗೆ ಪತ್ನಿ ಪಂಕಜಾ ಹಾಗೂ ಅವಳಿ ಹೆಣ್ಣು ಮಕ್ಕಳಿದ್ದಾರೆ. ಕಳೆದ 6 ತಿಂಗಳಿಂದ ಅನಾರೋಗ್ಯದಿಂದಾಗಿ ಸಿಂಗಾಪೂರ್ ನ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅಮರ್ ಸಿಂಗ್ ಶನಿವಾರ ಸಾವನ್ನಪ್ಪಿದ್ದಾರೆ. ದುಬೈನಲ್ಲಿದ್ದಾಗ ಅಮರ್ ಸಿಂಗ್ ಅವರಿಗೆ 2013 ರಲ್ಲಿ ಕಿಡ್ನಿ ವೈಫಲ್ಯವಾಗಿತ್ತು. ಬಳಿಕ ಚೇತರಿಸಿಕೊಂಡಿದ್ದ ಅವರು 2016 ರಲ್ಲಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಕಳೆದ ಮಾರ್ಚ್ ನಲ್ಲಿ ಅಮರ್ ಸಿಂಗ್ ಮೃತಪಟ್ಟ ಬಗ್ಗೆ ವದಂತಿ ಹರಡಿತ್ತು. ಆಗ ಸಿಂಗಾಪುರದಿಂದಲೇ ಅಮರ್ ಸಿಂಗ್ ಅವರು ಸೋಶಿಯಲ್ ಮೀಡಿಯಾ ಮೂಲಕ ‘ಟೈಗರ್ ಜಿಂದಾ ಹೈ’ ಎಂದು ಮಾಹಿತಿ ನೀಡಿದ್ದರು.
ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ನಿಧನ
Follow Us