newsics.com
ಮುಂಬೈ: ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲ ತಾಣದಲ್ಲಿ ಫೋಸ್ಟ್ ಮಾಡಿದ್ದ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಮುಖ ಸೂತ್ರಧಾರ ಸಹಿತ ಏಳು ಆರೋಪಿಗಳನ್ನು ಬಂಧಿಸಲಾಗಿದೆ.
ಇಫ್ರಾನ್ ಈ ಹತ್ಯೆಯ ಸೂತ್ರಧಾರ ಎಂದು ಆರೋಪಿಸಲಾಗಿದೆ. ಆರು ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ವಶಕ್ಕೆ ಒಪ್ಪಿಸಿದೆ
ಮೆಡಿಕಲ್ ಸ್ಟೋರ್ ಹೊಂದಿದ್ದ ಉಮೇಶ್ ಎಂಬವರನ್ನು ಅಮರಾವತಿಯಲ್ಲಿ ಹತ್ಯೆ ಮಾಡಲಾಗಿತ್ತು.
ಜೂನ್ 21ರಂದು ಈ ಘಟನೆ ನ಼ಡೆದಿತ್ತು. ಇದೀಗ ಪ್ರಕರಣದ ತನಿಖೆಯನ್ನು ಎನ್ ಐ ಎ ಗೆ ಹಸ್ತಾಂತರಿಸಲಾಗಿದೆ