Tuesday, April 13, 2021

ಈ ಬಾರಿ 15 ದಿನ ಮಾತ್ರ ಅಮರನಾಥ ಯಾತ್ರೆ

ಶ್ರೀನಗರ: ಪ್ರಸಿದ್ದ ಅಮರನಾಥ ಯಾತ್ರೆಯ ಮೇಲೂ ಕೊರೋನಾದ ಕರಿ ನೆರಳು ಬೀರಿದೆ. ಕೇವಲ 15 ದಿನ ಮಾತ್ರ ಭಕ್ತರಿಗೆ ಹಿಮರೂಪದಲ್ಲಿರುವ ಶಿವಲಿಂಗದ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಪ್ರತಿವರ್ಷ  ಅಮರನಾಥ ಗುಹೆಯಲ್ಲಿರುವ  ಶಿವಲಿಂಗದ ದರ್ಶನ ಮಾಡಿ ಪುನೀತರಾಗುತ್ತಿದ್ದರು ಈ ಬಾರಿ ಬಾಲ್ ಟಲ್  ಮಾರ್ಗದ ಮೂಲಕ ಮಾತ್ರ ಅಮರನಾಥ ಯಾತ್ರೆಗೆ ಅನುಮತಿ ನೀಡಲಾಗಿದೆ.. ಇದೇ ವೇಳೆ  ಬದರಿನಾಥ ದರ್ಶನಕ್ಕೆ  ಜೂನ್ 30ರ ತನಕ ಭಕ್ತರಿಗೆ ಅನುಮತಿ ನೀಡದಂತೆ ದೇವಸ್ಥಾನದ ಮುಖ್ಯ ಅರ್ಚಕ ರಾವಲ್ ಈಶ್ವರ ಪ್ರಸಾದ್ ನಂಬೂದಿರಿ  ಉತ್ತರಾಖಂಡ್  ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳುವಂತೆ ಅವರು ಕೋರಿದ್ದಾರೆ. ಈಶ್ವರ್ ಪ್ರಸಾದ್ ನಂಬೂದಿರಿ ಕೇರಳದ ಕಣ್ಣೂರು ನಿವಾಸಿಯಾಗಿದ್ದು, ಉತ್ತರಾಖಂಡ್ ನಲ್ಲಿರುವ ಬದರಿನಾಥ ದೇವಸ್ಥಾನದ ಮುಖ್ಯ ಅರ್ಚಕರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!