Saturday, April 17, 2021

ಭಾರತದಲ್ಲಿ ವಾಸಿಸಲು ಅವಕಾಶ ನೀಡಿ: ಹೈಕೋರ್ಟ್ ಗೆ ಅಮೆರಿಕ ಪ್ರಜೆ ಮನವಿ

ಕೊಚ್ಚಿ:ಭಾರತದ ಹಾಗೆ ಅಮೆರಿಕದಲ್ಲಿ ಕೊರೋನಾ ಸೋಂಕಿತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಳೆದ ಐದು ತಿಂಗಳಿನಿಂದ ನಾನು ಕೇರಳದಲ್ಲಿದ್ದೇನೆ. ಪ್ರವಾಸಿ ವೀಸಾದ ಮೇಲೆ ಇಲ್ಲಿಗೆ ಬಂದಿದ್ದೇನೆ. ಅದನ್ನು  ಬ್ಯುಸಿನೆಸ್ ವೀಸಾ ಆಗಿ ಪರಿವರ್ತನೆ ಮಾಡಿ ಕೊಡಿ ಎಂದು ಅಮೆರಿಕದ ಪ್ರಜೆ  ಜೋನಿ ಪಿಯರ್ಸ್  ಮನವಿ ಮಾಡಿದ್ದಾರೆ.

74ರ ಹರೆಯದ ಜೋನಿ ಪಿಯರ್ಸ್ ಐದು ತಿಂಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದರು. ಬಳಿಕ ಲಾಕ್ ಡೌನ್ ಘೋಷಣೆಯಿಂದಾಗಿ ಅಮೆರಿಕಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಇದೀಗ ಕೇರಳದಲ್ಲಿ ಕೊರೋನಾ ಸೋಂಕಿತರ ಬಗ್ಗೆ ತೆಗೆದುಕೊಳ್ಳುತ್ತಿರುವ ಕಾಳಜಿಯಿಂದ ಅವರು ಪ್ರಭಾವಿತರಾಗಿದ್ದಾರೆ. ಅಮೆರಿಕಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ.  ತಮ್ಮ ಮನವಿ ಪುರಸ್ಕರಿಸುವಂತೆ  ಕೇಳಿಕೊಂಡಿದ್ದಾರೆ. ಅವಕಾಶ ಸಿಕ್ಕಿದ್ದರೆ ಗಂಟು ಮೂಟೆ ಕಟ್ಟಿಕೊಂಡು ಕ್ಷಣಮಾತ್ರದಲ್ಲಿ ಅಮೆರಿಕಕ್ಕೆ ಹಾರುವ ಸಾವಿರಾರು ಮಂದಿ ನಮ್ಮ ಕಣ್ಣೆದುರು ಇರುವಾಗ  ಪಿಯರ್ಸ್ ಬೇಡಿಕೆ ವಿಚಿತ್ರವಾಗಿ ಕಂಡರೂ ಅಚ್ಚರಿಯಿಲ್ಲ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!