Monday, April 12, 2021

ಕ್ವಾರಂಟೈನ್’ಗೆ ಅಮೀರ್ ಖಾನ್ ಕುಟುಂಬ

ಮುಂಬೈ: ಕೊರೋನಾ ಭೀತಿಯಲ್ಲಿರೋ ವಿವಿಐಪಿಗಳಿಗೆ ಮನೆ ಕೆಲಸದವರೇ ಮುಳುವಾಗಿ ಪರಿಣಮಿಸುತ್ತಿದ್ದಾರೆ. ಇದೀಗ ಬಾಲಿವುಡ್ ನ ಮಿಸ್ಟರ್ ಫರ್ಪೆಕ್ಟ್ ಖ್ಯಾತಿಯ ಅಮಿರ್ ಖಾನ್ ಮನೆಯ ಕೆಲಸದವರು ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಅಮಿರ್ ಖಾನ್ ಕುಟುಂಬವೂ ಕ್ವಾರಂಟೈನ್ ಗೆ ಒಳಗಾಗಿದೆ‌.
ಅಮಿರ್ ಖಾನ್ ಕುಟುಂಬದ ಎಲ್ಲ ಸದಸ್ಯರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ.
ಈ ವಿಚಾರವನ್ನು ಅಮೀರ್ ಖಾನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಇನ್ನು ನನ್ನ ತಾಯಿಯ ಮೆಡಿಕಲ್ ಚೆಕ್ ಅಪ್ ಬಾಕಿ ಇದೆ. ಅವರು ಈ ಪರೀಕ್ಷೆಯಲ್ಲಿ ಗೆದ್ದು ಬರಲಿ ಎಂದು ಹಾರೈಸಿ ಎಂದು ಮನವಿ ಮಾಡಿದ್ದಾರೆ.
ತಮ್ಮ ತಾಯಿ ಜೀನತ್ ಹುಸೈನ್ ಅವರನ್ನು ಪರೀಕ್ಷೆಗೆ ಕರೆದೊಯ್ಯುತ್ತಿರುವುದಾಗಿ ಹೇಳಿರುವ ಅಮೀರ್ ಖಾನ್, ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಸಿಬ್ಬಂದಿಯ ಚಿಕಿತ್ಸೆಗೆ ಹಾಗೂ ರೋಗನಿರೋಧಕ ಸಿಂಪಡಣೆ ಮಾಡಿ ಮುಂಜಾಗ್ರತೆ ವಹಿಸಿದ ಮುಂಬೈ ಸ್ಥಳೀಯ ಆಡಳಿತವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!