Monday, May 17, 2021

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com
ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ.
106 ರನ್ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡ 4 ವಿಕೆಟ್ ಕಳೆದುಕೊಂಡು 15.4 ಓವರ್ಗಳಲ್ಲೇ ಗುರಿ ತಲುಪಿತು. ಚೆನ್ನೈ ಪರ ಡುಪ್ಲೆಸಿಸ್ ಅಜೇಯ 36 ರನ್, ಮೋಯಿನ್ ಅಲಿ 31 ಎಸೆತಗಳಲ್ಲಿ 46 ರನ್ ಗಳಿಸಿ ಗೆಲುವಿಗೆ ಕಾರಣರಾದರು.
ಟಾಸ್ ಸೋತು ಬ್ಯಾಟಿಂಗ್ಗಿಳಿದ ಪಂಜಾಬ್ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 106 ರನ್ ಮಾತ್ರ ಗಳಿಸಿತು. ಪಂಜಾಬ್ ಪರ ಶಾರುಖ್ ಖಾನ್ 36 ಎಸೆತಗಳಲ್ಲಿ 47 ರನ್ ಗಳಿಸಿ ತಂಡ ಗೌರವಯುತ ಮೊತ್ತ ಗಳಿಸಲು ಕಾರಣರಾದರು.
ಚೆನ್ನೈ ಪರ ದೀಪಕ್ ಚಹಾರ್ 13 ರನ್ ನೀಡಿ 4 ವಿಕೆಟ್ ಪಡೆಯುವ ಮೂಲಕ ವೃತ್ತಿ ಜೀವನದ ಶ್ರೇಷ್ಠ ಸ್ಪೆಲ್ ಮಾಡಿದರು. ಕರನ್, ಬ್ರಾವೋ, ಮೋಯಿನ್ ಅಲಿ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!