Saturday, April 17, 2021

ಜಲಪೂರೈಕೆ ಕಾಮಗಾರಿ ವೇಳೆ ಪ್ರಾಚೀನ ವಿಷ್ಣು, ಸೂರ್ಯ ವಿಗ್ರಹ ಪತ್ತೆ

ಪಾಟ್ನಾ: ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿ ಸಂದರ್ಭದಲ್ಲಿ  ಪ್ರಾಚೀನ ವಿಗ್ರಹಗಳು ಪತ್ತೆಯಾಗಿವೆ.  ವಿಷ್ಣು ಮತ್ತು ಸೂರ್ಯನ ಪ್ರಾಚೀನ  ವಿಗ್ರಹ ಪತ್ತೆಯಾಗಿದ್ದು, ಇದರ ಕಾಲಘಟ್ಟವನ್ನು ಇನ್ನಷ್ಟೇ ನಿರ್ಧರಿಸಬೇಕಾಗಿದೆ. ಬಿಹಾರದ ಶೇಕ್ ಪುರ ಜಿಲ್ಲೆಯಲ್ಲಿ ಕೇಂದ್ರ ಜಲಶಕ್ತಿ  ಸಚಿವಾಲಯದ ನೇತೃತ್ವದಲ್ಲಿ  ಜಲಜೀವನ್ ಕಾಮಗಾರಿ ಸಂದರ್ಭದಲ್ಲಿ ಇದು ಪತ್ತೆಯಾಗಿದೆ. ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಸುಭೋಧ್ ಯಾದವ್ ಈ ಇಲಾಖೆಯ ನೇತೃತ್ವ ವಹಿಸಿದ್ದಾರೆ. ಸುಭೋದ್ ಯಾದವ್ ಇದೀಗ ಕೇಂದ್ರ ಸರ್ಕಾರದ ಸೇವೆಯಲ್ಲಿ ನಿಯೋಜನೆಗೊಂಡಿದ್ದಾರೆ. ಟ್ವಿಟರ್ ನಲ್ಲಿ ಸುಭೋದ್ ಯಾದವ್ ಅವರು, ಈ ಚಿತ್ರವನ್ನು ಶೇರ್ ಮಾಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!