ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆಯ ಅಧಿವೇಶನ ಇಂದು ಆರಂಭಗೊಳ್ಳಲಿದ್ದು, ಮೂರು ರಾಜಧಾನಿ ಪ್ರಸ್ತಾಪ ವಿವಾದದ ಕಿಡಿ ಹೊತ್ತಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಹಿರಿಯ ತೆಲುಗುದೇಶಂ ನಾಯಕರಿಗೆ ಗೃಹ ಬಂಧನ ವಿಧಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭ ಇದಕ್ಕಿಂತಲೂ ಉತ್ತಮವಾಗಿತ್ತು ಎಂದು ಜಗನ್ ಆಡಳಿತದ ವಿರುದ್ಧ ಕಿಡಿ ಕಾರಿದ್ದಾರೆ.