Monday, April 12, 2021

ಆಸ್ತಿ ಮಾರುವ ಟಿಟಿಡಿ ತೀರ್ಮಾನಕ್ಕೆ ಆಂಧ್ರ ಸರ್ಕಾರ ತಡೆ

ತಿರುಪತಿ: ತಮಿಳುನಾಡಿನಲ್ಲಿರುವ 23 ಆಸ್ತಿ ಮಾರಾಟ ಮಾಡುವ ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ (ಟಿಟಿಡಿ) ತೀರ್ಮಾನಕ್ಕೆ ಆಂಧ್ರಪ್ರದೇಶ ಸರ್ಕಾರ ತಡೆ ನೀಡಿದೆ
ಹಿಂದೂ ಸಂಘಟನೆಗಳು ಟಿಟಿಡಿಯ ತೀರ್ಮಾನವನ್ನು ಖಂಡಿಸಿದ್ದರು. ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದಾಗಿ ಸರ್ಕಾರ ಸೋಮವಾರ ಟಿಟಿಡಿ ತೀರ್ಮಾನಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ತಮಿಳುನಾಡು ರಾಜ್ಯದ ವಿವಿಧ ಜಿಲ್ಲೆಯಲ್ಲಿ ದೇವಸ್ಥಾನದ ಹೆಸರಿನಲ್ಲಿರುವ 23 ಆಸ್ತಿ ಮಾರಾಟ ಮಾಡಲು ಟಿಟಿಡಿ ಹೊರಟಿತ್ತು. ಇದರಲ್ಲಿ ಮನೆ, ನಿವೇಶನ, ಕೃಷಿ ಭೂಮಿ ಸೇರಿತ್ತು. ಟಿಟಿಡಿ ಈ ಭೂಮಿಗೆ ಬೆಲೆ ನಿಗದಿ ಮಾಡಿತ್ತು. ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಲು 8 ಅಧಿಕಾರಿಗಳ ಎರಡು ಸಮಿತಿ ರಚಿಸಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!