ಮುಂಬೈನಲ್ಲಿ ಮತ್ತೆ ಬಾಂಬ್ ಸ್ಫೋಟದ ಬೆದರಿಕೆ ಕರೆ: ಆತಂಕ ಸೃಷ್ಟಿ

newsics.com ಮುಂಬೈ (ಮಹಾರಾಷ್ಟ್ರ): ಮತ್ತೊಂದು ಬಾಂಬ್ ಸ್ಫೋಟದ ಬೆದರಿಕೆ ಕರೆ ಬಂದಿದ್ದು, ಮುಂಬೈನಲ್ಲಿ ಆತಂಕ‌ ಮಡುಗಟ್ಟಿದೆ. ಮುಂಬೈನ ಸಾಂತಾಕ್ರೂಜ್‌ನಲ್ಲಿರುವ ವ್ಯಕ್ತಿಯೊಬ್ಬರು ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಸ್ವೀಕರಿಸಿದ್ದಾರೆ ಎನ್ನಲಾಗಿದೆ. ಬೆದರಿಕೆ ಕರೆ ಕುರಿತು ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಪೊಲೀಸರು ಕರೆ ಬಂದಿರುವ ಸ್ಥಳ ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಂದು ತಿಂಗಳ ಹಿಂದೆಯೂ ಪಂಚತಾರಾ ಹೋಟೆಲ್‌ವೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಆಗ ತನಿಖೆ ಕೈಗೊಂಡಿದ್ದ ಮುಂಬೈ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದರು.