ಶ್ರೀನಗರ: ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಭೂ ಸೇನಾ ಮುಖ್ಯಸ್ಥ ಎಂ ಎಂ ನರವಾಣೆ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಿದ್ದಾರೆ. ಹಿರಿಯ ಸೇನಾಧಿಕಾರಿಗಳ ಜತೆ ಅವರು ಗಡಿಯಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಭಾರತ- ಚೀನಾ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ , ಪಾಕಿಸ್ತಾನ ಪರಿಸ್ಥಿತಿಯ ದುರುಪಯೋಗ ಪಡೆಯಲು ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಗಡಿಯಲ್ಲಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ.
ಗಡಿಯಲ್ಲಿ ಪಾಕಿಸ್ತಾನದ ಯಾವುದೇ ದುಸ್ಸಾಹಸ ನಡೆಸಿದರೆ ಅದಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಗುವುದು ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ