Newsics.com
ಮುಂಬೈ: ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎಂ ಎಸ್ ಕಾರ್ನಿಕ್ ಅವರನ್ನೊಳಗೊಂಡ ಪೀಠ ಈ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ. ಶುಕ್ರವಾರ ನಿಗದಿಯಾಗಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಶನಿವಾರಕ್ಕೆ ಮುಂದೂಡಿತ್ತು.
ಅರ್ನಾಬ್ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸಬೇಕು ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ನಾಬ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿಮಾಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ಬಲವಾಗಿ ವಿರೋಧಿಸುವ ಸಾಧ್ಯತೆಯಿದೆ. ಜಾಮೀನಿನ ಮೇಲೆ ಬಿಡುಗಡೆಯಾದರೆ ತನಿಖೆಯ ಮೇಲೆ ಪ್ರಭಾವ ಬೀರಲಿದ್ದಾರೆ ಎಂಬ ವಾದವನ್ನು ಸರ್ಕಾರದ ಪರ ವಕೀಲರು ಇಂದು ನ್ಯಾಯಾಲಯದಲ್ಲಿ ಮಂಡಿಸುವ ಸಾಧ್ಯತೆಯಿದೆ.
ನ್ಯಾಯಾಂಗ ಬಂಧನದಲ್ಲಿರುವ ಅರ್ನಾಬ್ ಅವರನ್ನು ಇದೀಗ ಅಲಿಭಾಗ್ ನಲ್ಲಿ ಇರಿಸಲಾಗಿದೆ. ಅಲಿಭಾಗ್ ನಲ್ಲಿರುವ ಶಾಲೆಯನ್ನು ತಾತ್ಕಾಲಿಕ ಜೈಲು ಆಗಿ ಪರಿವರ್ತಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಅರ್ನಾಬ್ ಗೋ ಸ್ವಾಮಿಯನ್ನು ಈ ಜೈಲ್ಲಿನಲ್ಲಿ ಇರಿಸಲಾಗಿದೆ.