Wednesday, October 5, 2022

ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ತೀರ್ಪು ಮಧ್ಯಾಹ್ನ 3ಗಂಟೆಗೆ

Follow Us

Newsics.com

ಮುಂಬೈ: ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಸಲ್ಲಿಸಿರುವ ಜಾರ್ಮೀನು ಅರ್ಜಿ ಕುರಿತು ಬಾಂಬೆ ಹೈಕೋರ್ಟ್ ಇಂದು ತೀರ್ಪು ನೀಡಲಿದೆ. ಮಧ್ಯಾಹ್ನ ಮೂರು ಗಂಟೆಗೆ ನ್ಯಾಯಾಲಯ ತೀರ್ಪು ನೀಡುವ ನಿರೀಕ್ಷೆಯಿದೆ. ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಅರ್ನಾಬ್ ಗೋ ಸ್ವಾಮಿಯನ್ನು ಇದೀಗ ನವಿ ಮುಂಬೈ ಸಮೀಪದಲ್ಲಿರುವ ತಲೋಜಾ ಜೈಲಿನಲ್ಲಿ ಇರಿಸಲಾಗಿದೆ. ಅಲಿಭಾಗ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ  ವೇಳೆ ಅರ್ನಾಬ್ ಗೋ ಸ್ವಾಮಿ ಮೊಬೈಲ್ ಬಳಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ನಾಬ್ ಅವರನ್ನು ತಲೋಜಾ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂಬುದು ಪೊಲೀಸರ ವಾದ.

ತಲೋಜಾ ಜೈಲಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ತಂಡದ ಹಲವು ಸದಸ್ಯರು ಸೆರೆವಾಸ ಅನುಭವಿಸುತ್ತಿದ್ದಾರೆ. ಭೂಗತ ಪಾತಕಿ ಅಬು ಸಲೇಂ ಕೂಡ ಇದೇ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ.

77 ಎಕರೆ ಪ್ರದೇಶದಲ್ಲಿ ಇರುವ ತಲೋಜಾ ಜೈಲ್ಲಿನಲ್ಲಿ ಭೂಗತ ಪಾತಕಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಬು ಸಲೇಂ ಮತ್ತು ಅರುಣ್ ಗಾವ್ಳಿ  ಕೂಡ ಇಲ್ಲಿ ಸೆರೆವಾಸ  ಅನುಭವಿಸುತ್ತಿದ್ದಾರೆ.

ಮುಂಬೈ ಬಾಂಬ್ ಸ್ಪೋಟ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ಆರೋಪಿಗಳು ಈ ಜೈಲಿನಲ್ಲಿದ್ದಾರೆ.  ಇನ್ನೊಂದೆಡೆ ಅರ್ನಾಬ್  ಬಿಡುಗಡೆಗೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲು ಕೆಲವು ನಿವೃತ್ತ ಸೇನಾಧಿಕಾರಿಗಳು ತೀರ್ಮಾನಿಸಿದ್ದಾರೆ. ಅರ್ನಾಬ್ ಅವರ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!