Wednesday, October 5, 2022

ಸುಪ್ರೀಂನಲ್ಲಿ ನಾಳೆ ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ವಿಚಾರಣೆ

Follow Us

newsics.com
ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ವಿಚಾರಣೆ ನಾಳೆ(ನ.11) ಸುಪ್ರೀಂ ಕೋರ್ಟ್’ನಲ್ಲಿ ನಡೆಯಲಿದೆ.
ಅರ್ನಬ್ ಗೋಸ್ವಾಮಿ ಜಾಮೀನಿಗಾಗಿ ಈ ಹಿಂದೆ ಬಾಂಬೆ ಹೈಕೋರ್ಟ್’ಗೆ ಮೊರೆಯಿಟ್ಟಿದ್ದರು. ಆದರೆ ಬಾಂಬೆ ಹೈಕೋರ್ಟ್’ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಲಾಗಿತ್ತು.
ಮುಂಬೈ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಅರ್ನಬ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನಾಳೆ ನಡೆಯುವ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಜಸ್ಟೀಸ್ ಡಿ ವೈ ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿಯವರ ಪೀಠ ಅರ್ನಬ್ ಗೋಸ್ವಾಮಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಲಿದ್ದಾರೆ.
2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು.

ಸರ್ಕಾರಿ ಕೆಲಸಕ್ಕೆ ಸೇರಿದ್ದಕ್ಕೆ ಯುವತಿಯ ಕಣ್ಣುಕಿತ್ತ ದುಷ್ಕರ್ಮಿಗಳು

ಕಾರ್ಮಿಕರ ಪ್ರತಿಭಟನೆ; ತಾತ್ಕಾಲಿಕ ಲಾಕೌಟ್ ಘೋಷಿಸಿದ ಟೊಯೊಟಾ

14ರಾಜ್ಯಗಳಿಗೆ 6,195 ಕೋಟಿ ರೂ. ಆದಾಯ ಕೊರತೆ ಅನುದಾನ ಬಿಡುಗಡೆ

ಮೊಜಾಂಬಿಕ್ ಕ್ರೀಡಾಂಗಣದಲ್ಲಿ ಉಗ್ರರಿಂದ 50 ಮಂದಿಯ ಬರ್ಬರ ಹತ್ಯೆ

ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಉಗ್ರರ ಅಡಗುತಾಣದಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಡ್ರಗ್ಸ್ ದಂಧೆ ಬಯಲಿಗೆಳೆವ ಭಯ; ಟಿವಿ ಪತ್ರಕರ್ತನ ಕೊಲೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!