Wednesday, October 5, 2022

ಅರ್ನಬ್’ಗೆ ಸುಪ್ರೀಂ ಜಾಮೀನು

Follow Us

NEWSICS.COM

ಮುಂಬೈ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ (ನ.11) ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಅರ್ನಾಬ್ ಗೋಸ್ವಾಮಿ ಅವರನ್ನು ಎಂಟು ದಿನಗಳ ಹಿಂದೆ ಬಂಧಿಸಲಾಗಿತ್ತು. ಬಾಂಬೆ‌ ಹೈ ಕೋರ್ಟ್’ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಕೋರಿದ್ದರು. ಆದರೆ ಕೋರ್ಟ್ ಜಾಮೀನು ನೀಡಲು ನಿರಾಕರಿಸಿ ಸೆಷನ್ಸ್ ಕೋರ್ಟ್‌ನಲ್ಲಿಯೇ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಆದರೆ ಅರ್ನಾಬ್ ಪರ ವಕೀಲ ಹರೀಶ್ ಸಾಳ್ವೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ನಾಬ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50,000 ರೂ.ಗಳ ಬಾಂಡ್ ಮೂಲಕ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಹೇಳಿದೆ.

ಪ್ರಿ ವೆಡ್ಡಿಂಗ್ ಶೂಟ್ ದುರಂತಕ್ಕೆ ಹೈಹೀಲ್ಡ್ ಚಪ್ಪಲಿ ಕಾರಣವಂತೆ…!

ಮಾರಕಾಸ್ತ್ರಗಳಿಂದ ಹಲ್ಲೆ‌ ಮಾಡಿ ಸಹೋದರರ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!