Saturday, December 10, 2022

ಶಾಲೆಯಲ್ಲಿ ರಾತ್ರಿ ಕಳೆದ ಅರ್ನಾಬ್ ಗೋ ಸ್ವಾಮಿ

Follow Us

Newsics.com

ಮುಂಬೈ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಆಲಿ ಭಾಗ್ ನಲ್ಲಿರುವ ಶಾಲೆಯಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಈ ಶಾಲಾ ಕಟ್ಟಡವನ್ನು ತಾತ್ಕಾಲಿಕ ಜೈಲು ಆಗಿ ಪರಿವರ್ತಿಸಲಾಗಿದೆ. ಮಹಾರಾಷ್ಟ್ರದ 23 ನಗರಗಳಲ್ಲಿ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ.

ಈ ತಾತ್ಕಾಲಿಕ ಜೈಲುಗಳಲ್ಲಿ ಮೊದಲಿಗೆ ಆರೋಪಿಗಳನ್ನು ಇರಿಸಲಾಗುವುದು. 14 ದಿನಗಳು ಕಳೆದ ಬಳಿಕ ವೈದ್ಯಕೀಯ ತಪಾಸಣೆ ನಡೆಸಿ ಮುಖ್ಯ ಜೈಲುಗಳಿಗೆ ಆರೋಪಿಗಳನ್ನು ಕಳುಹಿಸುವ ವ್ಯವಸ್ಥೆ ಮಹಾರಾಷ್ಟ್ರದಲ್ಲಿ ಜಾರಿಯಲ್ಲಿದೆ.

ಆಲಿಭಾಗ್ ಜೈಲ್ಲಿನಲ್ಲಿ 82 ಕೈದಿಗಳನ್ನು ಇರಿಸಬಹುದಾಗಿದೆ. ಇದೀಗ 99 ಕೈದಿಗಳು ಈ ಸೆರೆಮನೆಯಲ್ಲಿದ್ದಾರೆ. ಅಲಿಭಾಗ್ ನ್ಯಾಯಾಲಯ ಅರ್ನಾಬ್ ಗೋ ಸ್ವಾಮಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭಾಗಲ್ಪುರದಲ್ಲಿ ದೋಣಿ ಮುಳುಗಡೆ: ನೂರು ಮಂದಿ ನಾಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಡಿಸೆಂಬರ್ 15ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಭೇಟಿ

newsics.com ಬೆಂಗಳೂರು:  ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಹೈಕಮಾಂಡ್ ಇದೀಗ ರಾಜ್ಯದತ್ತ ದೃಷ್ಟಿ ನೆಟ್ಟಿದೆ. ಇದರ ಮೊದಲ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ...

ಕಾರ್ಕಳ ಬಳಿ ಭೀಕರ ಅಪಘಾತ: ದಂಪತಿ, ಮಗು ಸಹಿತ ಮೂವರ ಸಾವು

newsics.com ಮಂಗಳೂರು:  ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ  ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಬಸ್ ಮತ್ತು...

ಇಂಡಿಗೋ ವಿಮಾನದಲ್ಲಿ ಹರಿದ ಸೀಟು: ಪೇಟಿಎಂ‌ ಸಿಇಒಗೆ ಅಚ್ಚರಿ!

newsics.com ಮುಂಬೈ: ನೀವು ಬಸ್‌ನಲ್ಲೋ, ಆಟೋದಲ್ಲೋ ಹರಿದ ಸೀಟುಗಳನ್ನು ನೋಡಿರಬಹುದು. ಆದರೆ ವಿಮಾನದಲ್ಲೂ ಹರಿದ ಸೀಟಿನ ಚಿತ್ರವನ್ನು ಪೇಟಿಎಂ ಸಿಇಒ Paytm CEO ಹಂಚಿಕೊಂಡಿದ್ದಾರೆ. 'ಈ ಏರ್‌ಲೈನ್‌ನಲ್ಲಿ ಮಾತ್ರ ಇಂತಹ ಹರಿದ ಸೀಟನ್ನು ಮೊದಲು ನೋಡಲಾಗಿದೆ'...
- Advertisement -
error: Content is protected !!