Tuesday, April 13, 2021

ಆರೋಗ್ಯ ಸೇತು ಆಪ್ ಮತ್ತೆ ಸಕ್ರಿಯ

ನವದೆಹಲಿ:ಮಾರಕ ಕೊರೋನಾದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ  ಆರೋಗ್ಯ ಸೇತು ಆಪ್ ಮತ್ತೆ ಸಕ್ರಿಯವಾಗಿದೆ. ಮಂಗಳವಾರ ರಾತ್ರಿ ಈ ಆಪ್ ನಲ್ಲಿ ಕೆಲವು ತಾಂತ್ರಿಕ ತೊಂದರೆ ಕಾಣಿಸಿಕೊಂಡಿತು. ಇದೀಗ ಎಲ್ಲ ತಾಂತ್ರಿಕ ಸಮಸ್ಯೆ ಬಗೆಹರಿಸಲಾಗಿದೆ ಎಂದು ಮೂಲಗಳು ಹೇಳಿವೆ.  ಪ್ರಯಾಣದ ಸಂದರ್ಭದಲ್ಲಿ ಮುಖ್ಯವಾಗಿ ರೈಲು ಮತ್ತು ವಿಮಾನ ಯಾನದ ವೇಳೆ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ವ್ಯಕ್ತಿಯ ಪರಿಸರದಲ್ಲಿನ ಕೊರೋನಾ ಸ್ಥಿತಿಗತಿ ಕುರಿತು ಈ ಆಪ್ ಮಾಹಿತಿ  ನೀಡುತ್ತದೆ. ಆರೋಗ್ಯ ಸೇತು ಆಪ್ ನಿಂದ ಖಾಸಗಿತನದ ಉಲ್ಲಂಘನೆಯಾಗುತ್ತದೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಕೇಂದ್ರ ಸರ್ಕಾರ ಇದನ್ನು ನಿರಾಕರಿಸಿ ಸ್ಪಷ್ಟೀಕರಣ ನೀಡಿತ್ತು

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!